ಭೂ ಕಬಳಿಕೆ ಆರೋಪ: ಜಾಧವ್ ಅಮಾನತ್ತಿಗೆ ಹಿರೇಮಠ್ ಒತ್ತಾಯ

ಶುಕ್ರವಾರ, 26 ಆಗಸ್ಟ್ 2016 (17:34 IST)
ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರನ್ನು ಕೂಡಲೇ ಅಮಾನತ್ತುಗೊಳಿಸಿ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್.ಹಿರೇಮಠ್ ಆಗ್ರಹಿಸಿದ್ದಾರೆ.
 
ಧಾರವಾಡದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅರವಿಂದ್ ಜಾಧವ್ ಸೇವಾ ಅವಧಿಯಲ್ಲಿ ನಡೆದಿರುವ ಎಲ್ಲ ಆಕ್ರಮಗಳ ಕುರಿತು ತನಿಖೆಯಾಗಬೇಕು. ಹಾಗೂ ಅವರು ಬೆಂಗಳೂರಿನಲ್ಲಿ ಇರದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
 
ಹೆಗ್ಗನಹಳ್ಳಿ ವ್ಯಾಪ್ತಿಯಲ್ಲಿ ಅರವಿಂದ್ ಜಾಧವ್ ಅವರ ತಾಯಿಯ ಹೆಸರಿನಲ್ಲಿ 16 ಎಕರೆ ಜಮೀನಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು. ಹಾಗೂ ಅವರ ತಾಯಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದರು. 
 
ಕಂದಾಯ ಸಚಿವ ಕಾಗೋಡು ತಿಮ್ಮಪ್ಪಗೆ ತಿರುಗೇಟು.....
 
ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡುವುದನ್ನು ನಿಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್.ಹಿರೇಮಠ್ ಗರಂ ಆದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ