ಭಾರೀ ಮಳೆಗೆ ಮಲೆ ಮಹದೇಶ್ವರ ಬೆಟ್ಟ ಹಾಗೂ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ
ಬುಧವಾರ, 23 ಅಕ್ಟೋಬರ್ 2019 (10:14 IST)
ಚಾಮರಾಜನಗರ : ರಾಜ್ಯಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ತಡೆಯುಂಟಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಪಾಲಾರ್ ಮಾರ್ಗದಲ್ಲಿ ಮೂರು ಕಡೆ ರಸ್ತೆ ಕುಸಿತವಾಗಿದ್ದು, ಪರಿಣಾಮ ವಾಹನಗಳು ಹಾಗೂ ಅಂತರ್ ರಾಜ್ಯ ಸಂಪರ್ಕಿಸುವ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಹೋಗೆನಕಲ್ ಫಾಲ್ಸ್ ಗೆ ಸಂಪರ್ಕ ಕಲ್ಪಿಸುವ ಕೆಲ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಹಾಗೇ ಚಾಮುಂಡಿ ಬೆಟ್ಟದಲ್ಲೂ ಭೂ ಕುಸಿತ ಉಂಟಾಗಿದ್ದು, ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎನ್ನಲಾಗಿದೆ.