ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲವೆಡೆ ಭೂಕುಸಿತ: ಬೆಂಗಳೂರು–ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

Sampriya

ಗುರುವಾರ, 17 ಜುಲೈ 2025 (14:05 IST)
Photo Credit X
ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. 

ಭಾರೀ ಮಳೆಗೆ ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75 ತಲುಪಲು ಅವಕಾಶವಿದೆ. 

ಮಂಗಳೂರಿನ ಕದ್ರಿ ಹಿಲ್ಸ್ನ ಸರ್ಕ್ಯೂಟ್ ಹೌಸ್ ಬಳಿಯ ರಸ್ತೆಗೆ ಬೃಹತ್ ಗುಡ್ಡ ಕುಸಿತವಾಗಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಗೆ ಬಿದ್ದಿದೆ. ವಾಹನ ಸಂಚಾರ ಇರುವ ಈ ರಸ್ತೆಗೆ ರಾತ್ರಿ ವೇಳೆ ಗುಡ್ಡ ಬಿದ್ದಿರೋದ್ರಿಂದ ಯಾವುದೇ ಅನಾಹುತಗಳಾಗಿಲ್ಲ. 

ಮೇರಿಹಿಲ್‌ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ