ನವದೆಹಲಿ, ಆ. 2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾದ ಒತ್ತಡ ಹೆಚ್ಚಾಗುತ್ತಿದೆ. ಆದರೆ ಏಳು ಪ್ರಮುಖ ಸಮಸ್ಯೆಗಳಿಂದಾಗಿ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿದೆ. ಕೂಡಲೇ ಸಮಸ್ಯೆ ಪರಿಹರಿಸಿ ಸಂಪುಟ ವಿಸ್ತರಣೆಗೆ ಅನುವು ಮಾಡಿಕೊಡುವಂತೆ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಆದ್ಯಕ್ಷ ಜೆ. ಪಿ. ನಡ್ಡ ಬಳಿ ಮನವಿ ಮಾಡಿದ್ದಾರೆ.