ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

ಶನಿವಾರ, 19 ಆಗಸ್ಟ್ 2023 (14:54 IST)
ಬೆಂಗಳೂರು : ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
 
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ.

ಈ ತಿಂಗಳ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದು, ಅದೇ ದಿನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಐದು ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈ ಮೂಲಕ ಚಾಲನೆ ದೊರೆಯಲಿದೆ. ಈ ಯೋಜನೆಯ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ