ದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ 7ಮಂದಿ ಶಂಕಿತ ಶೂಟರ್‌ಗಳನ್ನು ದೆಹಲಿ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 12ರಂದು ಎನ್‌ಸಿಪಿ, ಸೆಲೆಬ್ರಿಟಿಗಳ ಆಪ್ತ ಸ ಬಾಬಾ ಸಿದ್ದೀಕಿ ಅವರನ್ನು ಹತ್ಯೆ ಮಾಡಲಾಗಿತ್ತು. ಸಿದ್ದಿಕಿ ಹತ್ಯೆಯ ಹೊಣೆ ಹೊತ್ತು, ಬಿಷ್ಣೋಯಿ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದ. ಇದೀಗ ಗ್ಯಾಂಗ್‌ನ 7ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡಗಳನ್ನು ವಶಪಡಿಸಿಕೊಂಡಿದ್ದಾರೆ. ಸಿದ್ದೀಕಿ ಹತ್ಯೆಗೂ ಇವರಿಗೂ ಇರುವ ನಂಟಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಆಪ್ತರಾಗಿರುವ ಅರ್ಜೂ ಬಿಷ್ಣೋಯ್ ಅವರ ನಿರ್ದೇಶನದ ಮೇರೆಗೆ ಅವರು ರಾಜಸ್ಥಾನದಲ್ಲಿ ಯಾರನ್ನಾದರೂ ಗುರಿಯಾಗಿಸಲು ಯೋಜಿಸುತ್ತಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಬಾಬಾ ಸಿದ್ದಿಕ್ ಮೇಲಿನ ದಾಳಿಯಲ್ಲಿ ಅವರಿಗೆ ಹಲವು ರೀತಿಯಲ್ಲಿ ಸಂಬಂಧವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.