ಬೆಂಗಳೂರು: ಕಳೆದ ವಿನಧಾನಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಶಾಸಕ ಲಕ್ಷ್ಮಣ್ ಸವದಿ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಲಕ್ಷ್ಮಣ್ ಸವದಿ ಉಪ ಮುಖ್ಯಮಂತ್ರಿಯಾಗಿದ್ದರು. ಇದೀಗ ಬೆಳಗಾವಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಲಕ್ಷ್ಮಣ್ ಸವದಿ ಅಂದಿನ ಸರ್ಕಾರದ ಹಣಕಾಸಿನ ಪರಿಸ್ಥಿತಿ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿದ್ದಾಗ ನನಗೇ ವಿಷ ಕುಡಿಯಲೂ ಹಣವಿಲ್ಲ. ನಿನಗೆ ಎಲ್ಲಿಂದ ತರಲಿ ಎನ್ನುತ್ತಿದ್ದರು. ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಚುನಾವಣೆ ಸಮಯದಲ್ಲಿ ಹೇಳಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕಾಗಿ ಬಜೆಟ್ ನಲ್ಲಿ 55 ಸಾವಿರ ಕೋಟಿ ರೂ. ಮೀಸಲಿಟ್ಟಿದೆ ಎಂದಿದ್ದಾರೆ.
ಬಿಎಸ್ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ಸೇರಿಕೊಂಡು ರಾಜ್ಯದಲ್ಲಿ ಬಿಜೆಪಿ ಬಪಡಿಸಿದರು. ಆದರೆ ಬಳಿಕ ಈಗ ಕೆಎಸ್ ಈಶ್ವರಪ್ಪ ಪುತ್ರನಿಗೇ ಟಿಕೆಟ್ ಕೊಡಲಿಲ್ಲ. ಜಗದೀಶ್ ಶೆಟ್ಟರ್ ಗೆ ಮೊದಲು ಬಾಲ ಕಟ್ ಮಾಡಿದರು. ಈಗ ಬಾಲ ಚಿಗುರುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.