ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಅವರಿಗೆ ಲಿಖಿತ ದೂರು ನೀಡಲು ಲಕ್ಕಣ್ಣ ಆಗಮಿಸಿದಾಗ, ಹೆಬ್ಬಾಳ್ಕರ್ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹೆಬ್ಬಾಳ್ಕರ್ ಮತ್ತು ಲಕ್ಕಣ್ಣ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.