ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯದಲ್ಲಿ ದಾಳಿ ನಡೆಸುತ್ತಿದ್ದಾರೆ : ಕುಮಾರಸ್ವಾಮಿ

ಭಾನುವಾರ, 30 ಏಪ್ರಿಲ್ 2023 (14:25 IST)
ಮಂಡ್ಯ : ಎರಡು ರಾಷ್ಟ್ರೀಯ  ಪಕ್ಷಗಳ ನಾಯಕರು ರಾಜ್ಯದಲ್ಲಿ ದಾಳಿ ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿ ಪ್ರಧಾನಿ ಸೇರಿದಂತೆ ಕೇಂದ್ರದ ಮಂತ್ರಿಗಳು ಇಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ನಾಯಕರು ಕೂಡ ಇಲ್ಲಿಯೇ ಇದ್ದಾರೆ. ಆದರೆ ಕರ್ನಾಟಕದ ದುರಾದೃಷ್ಟವೇನೆಂದರೆ ಇಲ್ಲಿನ ಸಮಸ್ಯೆಗಳ ಬಗ್ಗೆ ಇಬ್ಬರೂ ಹೇಳುತ್ತಿಲ್ಲ.

ಪ್ರಧಾನ ಮಂತ್ರಿಗಳು ಕೇವಲ ಅವರನ್ನು ನಿಂದಿಸಿದ ಬಗ್ಗೆ ಹೇಳುತ್ತಾರೆ. ಕಾಂಗ್ರೆಸ್ನವರು ಅವರನ್ನು ವಿಷಸರ್ಪ ಎಂದು ಮಾತನಾಡುತ್ತಿದ್ದಾರೆ. ರಾಜ್ಯದ ಸಮಸ್ಯೆಗಳ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಬೆಳಗಾವಿಯ ಗಡಿ ವಿಚಾರದ ಬಗ್ಗೆ ಮೌನವಹಿಸಿದ್ದಾರೆ ಎಂದು ಕಿಡಿಕಾರಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ