ಕೋವಿಡ್ 19 ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯದೆ ಮಕ್ಕಳ ಕಲಿಕೆಯಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ರೂಪಿಸಿರುವ 'ಕಲಿಕಾ ಚೇತರಿಕೆ' ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್. ಆರ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾದ ಎಂ.ದೀಪಾ ಹಾಗೂ ಅಜೀಂ ಪ್ರೇಮ್¬ಜೀ ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ರಿಷಿಕೇಶ್ ಉಪಸ್ಥಿತರಿದ್ದರು.