ಕೇಂದ್ರ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಗರಂ ಆಗಿರೋ ಎಡಪಕ್ಷಗಳು ರೋಡಿಗಿಳಿದಿವೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಡಪಕ್ಷಗಳು ದೇಶದಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಹುಬ್ಬಳ್ಳಿ ನಗರದಲ್ಲಿಯೂ ಎಡಪಕ್ಷಗಳು ಪ್ರತಿಭಟನೆ ನಡೆಸಿವೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನೀತಿಗಳನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಧಿಕ್ಕಾರ ಕೂಗಿದ್ರು.
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೊರುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಸೂಕ್ತ ಕ್ರಮವನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತಿಲ್ಲ. ಅಲ್ಲದೇ ಸಾರ್ವಜನಿಕರ ಸಂಕಷ್ಟವನ್ನು ಆಲಿಸಬೇಕಿದ್ದ ಕೇಂದ್ರ ಸರ್ಕಾರ ಜನತೆಯ ಅಳಲನ್ನು ಕೇಳುತ್ತಿಲ್ಲ.
ನೆರೆ ಹಾವಳಿಯಿಂದ ರಾಜ್ಯದಲ್ಲಿ ಜನತೆ ಅಕ್ಷರಶಃ ನರಕಯಾತನೆ ಅನುಭವಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದ ಹಾಗೂ ದೇಶದ ಆರ್ಥಿಕ ಬಿಕ್ಕಟ್ಟಿಗೆ ಮತ್ತು ಸಾರ್ವಜನಿಕ ಸಂಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸಬೇಕು ಅಂದು ಒತ್ತಾಯಿಸಲಾಯಿತು.