ಹಾಸನದ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡರೆ ಶಿಕ್ಷೆ ಗ್ಯಾರಂಟಿ

Krishnaveni K

ಸೋಮವಾರ, 6 ಮೇ 2024 (09:44 IST)
ಹಾಸನ: ಹಾಸನದ ಲೈಂಗಿಕ ದೌರ್ಜನ್ಯ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡರೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಎಸ್ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಎಸ್ಐಟಿ ತನಿಖಾ ತಂಡದ ಮುಖ್ಯಸ್ಥ ಬಿಕೆ ಸಿಂಗ್ ಮಾಧ‍್ಯಮ ಪ್ರಕಟಣೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ, ವ್ಯಾಟ್ಸಾಪ್ ನಂತಹ ಮೆಸೆಂಜರ್ ಗಳ ಮೂಲಕ ವಿಡಿಯೋಗಳನ್ನು ಹಂಚುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67 (ಎ) ಐಟಿ ಆಕ್ಟ್ ಹಾಗೂ ಕಲಂ 228 ಎ (1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ.  ಖಾಸಗಿ ಮೆಸೆಂಜರ್ ಆಪ್ ಗಳ ಮೂಲಕವೂ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣ ಬೆಳಕಿಗೆ ಬಂದ ನಂತರ ಸಂತ್ರಸ್ತ ಮಹಿಳೆಯರ ಮುಖ ಕೂಡಾ ಬ್ಲರ್ ಮಾಡದೇ ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತಿಗಳಿಂದ ವ್ಯಕ್ತಿಗೆ ವಿಡಿಯೋ ಹಂಚಲಾಗಿತ್ತು. ಇದರಿಂದ ಮಹಿಳೆಯರ ಗೌರವಕ್ಕೆ ಧಕ್ಕೆಯುಂಟಾಗುತ್ತಿತ್ತು. ಹಲವು ಬಾರಿ ವಿಡಿಯೋ ಶೇರ್ ಮಾಡದಂತೆ ಮನವಿ ಮಾಡಿದರೂ ಎಗ್ಗಿಲ್ಲದೇ ಹರಿದಾಡುತ್ತಿತ್ತು.

ಹೀಗಾಗಿ ಈಗ ಎಸ್ ಐಟಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಹಿಳೆಯ ಗೌರವ ಕಾಪಾಡುವ ದೃಷ್ಟಿಯಿಂದ ವಿಡಿಯೋ ಶೇರ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಇದಲ್ಲದೆ ಸಂತ್ರಸ್ತ ಮಹಿಳೆಯರಿಗೆ ದೂರು ದಾಖಲಿಸಲು ಸಹಾಯವಾಣಿಯನ್ನೂ ತೆರೆಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ