ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷ
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಳೆದ 1 ತಿಂಗಳ ಅಂತರದಲ್ಲಿ 2 ಚಿರತೆಗಳು ಬೋನಿನಲ್ಲಿ ಸೆರೆಯಾಗಿದ್ದವು. ಈಗ ಮತ್ತೆ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಕಾಣಿಸಿಕೊಂಡಿದೆ.. ದೇವಸ್ಥಾನದ CCTVಯಲ್ಲಿ ಚಿರತೆ ಓಡಾಡುವ ದೃಶ್ಯ ಸೆರೆಯಾಗಿದೆ... ಚಿರತೆ ಹಾವಳಿಯಿಂದ ಗ್ರಾಮಸ್ಥರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ