ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ: ಬೋನಿಗೆ ಬಿದ್ದ ಚಿರತೆ

ಸೋಮವಾರ, 4 ಮೇ 2015 (12:45 IST)
ಕಳೆದ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಇಂದು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಾರ್ವಜನಿಕರ ಮಾಹಿತಿ ಪ್ರಕಾರ, ಚಿರತೆಯೊಂದು ಕಳೆದ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದು, ತಾವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಸಾರ್ವಜನಿಕರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಯೋಜನೆ ಹಾಕಿಕೊಂಡಿದ್ದ ಅಧಿಕಾರಿಗಳು, ಜಿಲ್ಲೆಯ ಮಾಗಡಿ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಬಳಿ ಬೋನನ್ನು ನಿರ್ಮಿಸಿದ್ದರು. ಅಲ್ಲದೆ ಕಾರ್ಯಾಚರಣೆ ಯಶಸ್ವಿಗಾಗಿ ನಾಯಿಯೊಂದನ್ನು ಬಳಸಿಕೊಂಡು ಮರಕ್ಕೆ ಕಟ್ಟಿ ಹಾಕಿದ್ದರು. ಈ ವೇಳೆ ನಾಯಿಯನ್ನು ತಿನ್ನಲೆಂದು ಬಂದ ಚಿರತೆ ಬೋನಿಗೆ ಬಿದ್ದಿದೆ.

ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆಯಿಂದ ನಿಟ್ಟುಸಿರು ಬಿಟ್ಟಿರುವ ಸಾರ್ವಜನಿಕರು, ಅರಣ್ಯಾಧಿಕಾರಿಗಳ ಕಾರ್ಯ ವೈಖರಿ ಹಾಗೂ ಸೇವೆಯನ್ನು ಮೆಚ್ಚಿದ್ದು, ಅಭಿನಂದನೆ ಸಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ