ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಕೆ

ಗುರುವಾರ, 16 ಡಿಸೆಂಬರ್ 2021 (14:09 IST)
ಒಂದು ವರ್ಷದಲ್ಲಿ ನಮ್ಮ ಮೆಟ್ರೋದಲ್ಲಿ ಸಂಚಾರ ನಡೆಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. 2019-20ರಲ್ಲಿ ಬಿಎಂಆರ್‌ಸಿಎಲ್ ಪ್ರತಿದಿನ 15 ಲಕ್ಷ ಜನರು ಪ್ರಯಾಣಿಸಲಿದ್ದಾರೆ ಎಂದು ಅಂದಾಜಿಸಿತ್ತು.
 
ಪೂರ್ವ-ಪಶ್ಚಿಮ ಕಾರಿಡಾರ್ ಮತ್ತು ಉತ್ತರ-ದಕ್ಷಿಣ ಕಾರಿಡಾರ್‌ ಸೇರಿ ನಮ್ಮ ಮೆಟ್ರೋ ರೈಲು 42 ಕಿ.ಮೀ. ಸಂಚಾರ ನಡೆಸುವಾಗ ಪ್ರತಿದಿನ ಸುಮಾರು 4 ಲಕ್ಷ ಜನರು ಸಂಚಾರ ನಡೆಸುತ್ತಿದ್ದರು. ಈಗ ಮಾರ್ಗ 56 ಕಿ. ಮೀ.ಗೆ ವಿಸ್ತರಣೆಯಾಗಿದ್ದು, ಪ್ರತಿದಿನ ಸಂಚಾರ ನಡೆಸುವ ಜನರ ಸಂಖ್ಯೆ 3 ಲಕ್ಷದ ಗಡಿ ದಾಟುತ್ತಿಲ್ಲ.ಬಿಎಂಆರ್‌ಸಿಎಲ್ 2019-20ರಲ್ಲಿ ಪ್ರತಿದಿನ 15 ಲಕ್ಷ ಜನರು ಸಂಚಾರ ನಡೆಸಲಿದ್ದಾರೆ ಎಂದು ಅಂದಾಜಿಸಿತ್ತು. ಆದರೆ ಗುರಿಯ ಶೇ 27ರಷ್ಟು ಜನರು ಮಾತ್ರ ಸಂಚಾರ ನಡೆಸಿದ್ದಾರೆ. ಕೋವಿಡ್ ಪರಿಸ್ಥಿತಿ ಬಳಿಕ ಮತ್ತೆ ರೈಲು ಸಂಚಾರ ಆರಂಭವಾದರೂ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ