ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ- ಕೆ.ಎಸ್.ಈಶ್ವರಪ್ಪ

ಭಾನುವಾರ, 9 ಡಿಸೆಂಬರ್ 2018 (14:14 IST)
ಶಿವಮೊಗ್ಗ : ನಾಳೆಯಿಂದ ಚಳಿಗಾಲದ ಅಧಿವೇಶನ ಹಿನ್ನಲೆ ಚಳಿಗಾಲದ ಅಧಿವೇಶನಕ್ಕೆ ಕಡಿಮೆ ಸಮಯ ಕೊಟ್ಟಿರುವುದು ಅನ್ಯಾಯ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘11 ದಿನದಲ್ಲಿ ಯಾವುದೇ ವಿಷಯದ ಬಗ್ಗೆ ಚರ್ಚೆ ಮಾಡೋಕೆ ಆಗಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕಬ್ಬು ಬೆಳೆಗಾರರ ಸಮಸ್ಯೆ ಇದೆ. ರಾಜ್ಯ ಸರ್ಕಾರದ ಮಂತ್ರಿಗಳು ಯಾವುದೇ ಹಳ್ಳಿಗೆ ಹೋಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

 ‘ಸಿದ್ದರಾಮಯ್ಯ ವಿದೇಶ ಪ್ರವಾಸ ಹೋಗುತ್ತಿದ್ದಾರೆ. ಅಧಿವೇಶನಕ್ಕೆ ಗೈರಾಗುತ್ತಾರೆಂಬ ಗಂಭೀರತೆ ಅವರಿಗಿಲ್ಲ. ಕಾಂಗ್ರೆಸ್ ಜೆಡಿಎಸ್ ಶಾಸಕರು ಇದನ್ನೇ ಮುಂದುವರಿಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ