ಏನ್ ಗ್ರೇಟರ್ ಬೆಂಗಳೂರು ಮಾಡ್ತಾರೋ ಮಾಡಲಿ-ಎಚ್ಡಿಕೆ ಟಾಂಗ್
ನನ್ನ ಜಿಲ್ಲೆಯ ಅಭಿವೃದ್ಧಿ ಕುರಿತು ಯಾವುದೇ ತಕರಾರು ಇಲ್ಲ. ಬಿಡದಿ ಗ್ರೇಟರ್ ಬೆಂಗಳೂರು ಸೇರ್ಪಡೆ ಸೇರಿ ಇಂಥ ಇನ್ನೂ ಇಪ್ಪತ್ತು ಘೋಷಣೆ ಮಾಡಲಿ. ಏನ್ ಗ್ರೇಟರ್ ಬೆಂಗಳೂರು ಮಾಡುತ್ತಾರೋ ಮಾಡಲಿ. ಈಗ ನಾವು ಬೆಂಗಳೂರನ್ನೇ ನೋಡುತ್ತಿಲ್ವಾ? ಮಳೆ ಬಂದಾಗ ಬೆಂಗಳೂರು ಏನಾಗುತ್ತಿದೆ ಗೊತ್ತಿಲ್ವಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಿಡದಿ ಗ್ರೇಟರ್ ಬೆಂಗಳೂರು ಸೇರ್ಪಡೆ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.