ಸಿದ್ದರಾಮಯ್ಯ ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆ ಇಲ್ಲ-HDK
ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ಸಿದ್ದಸುಳ್ಳುಗಳಿಗೆ ಕೊರತೆಯೇನೂ ಇಲ್ಲ” ಎಂದು ಟಾಂಗ್ ಕೊಟ್ಟಿದ್ದಾರೆ.“ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳ್ತಿರಾ ಸಿದ್ದರಾಮಯ್ಯನವರೇ?” ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.