ಆರ್ ಎಸ್ಎಸ್ ನಿಷೇಧಿಸಲಿ ನೋಡೋಣ : ಬಸವರಾಜ ಬೊಮ್ಮಾಯಿ ಸವಾಲು

ಶನಿವಾರ, 27 ಮೇ 2023 (09:09 IST)
ಬೆಂಗಳೂರು : ಆರ್ ಎಸ್ಎಸ್ ನಿಷೇಧಿಸಲಿ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಂಘಸಂಸ್ಥೆ ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ. ಒಂದು ಸಮುದಾಯದ ತುಷ್ಠೀಕರಣಕ್ಕೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಯಾರನ್ನು ತುಷ್ಠೀಕರಣ ಮಾಡ್ತಿದ್ದಾರೋ, ಅವರನ್ನೂ ಯಾಮಾರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆರ್ ಎಸ್ಎಸ್, ಬಜರಂಗದಳ ನಿಷೇಧದ ಬಗ್ಗೆ ಸಿಎಂ ಅವರು ತಮ್ಮ ಅಭಿಪ್ರಾಯ, ನಿಲುವು ಸ್ಪಷ್ಟಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನತೆಗೆ ತಿಳಿಸಲಿ. ಆರ್ ಎಸ್ಎಸ್ ನಿಷೇಧಿಸಲು ಯಾರಿಗೂ ಸಾಧ್ಯವಿಲ್ಲ. ಇಂತಹ ಸಾಹಸಕ್ಕೆ ಕೈಹಾಕಿದವರನ್ನು ಜನ ಈಗಾಗಲೇ ಮನೆಗೆ ಕಳಿಸಿದ್ದಾರೆ ಎಂದು ಎಚ್ಚರಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ