ತಲಾಖ್ ವಿರುದ್ಧ ದೂರು ದಾಖಲಿಸಲು ಅವಕಾಶ?
ಭಾರೀ ವಿವಾದಕ್ಕೆ ಕಾರಣವಾಗಿರುವ ತ್ರಿವಳಿ ತಲಾಖ್ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಹೆಚ್ಚಿದೆ.
ತೀವ್ರ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿರುವ ತ್ರಿವಳಿ ತಲಾಖ್ ರದ್ದುಗೊಳಿಸುವ ಸುಗ್ರೀವಾಜ್ಱಎಗೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ.
ತಿದ್ದುಪಡಿಗಳನ್ನು ಮಾಡುವ ಮೂಲಕ ಸುಗ್ರೀವಾಜ್ಱಎ ಹೊರಡಿಸಲು ನಿರ್ಧಾರ ಮಾಡಲಾಗಿದೆ. ಸಂತ್ರಸ್ತ ಮಹಿಳೆ ಅಥವಾ ಮಹಿಳೆಯ ಸಂಬಂಧಿಕರು ತ್ರಿವಳಿ ತಲಾಖ್ ಸಂಬಂಧವಾಗಿ ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ತ್ರಿವಳಿ ತಲಾಖ್ ಹೇಳಿದರೆ ಅದು ಅಪರಾಧವಾಗಲಿದೆ.