ಸುಗಮ ಕಲಾಪ ನಡೆಸಲು ಮೋದಿ ಸಂಪುಟದ ಸಚಿವ ಮಾಡಿದ್ದೇನು?

ಶನಿವಾರ, 8 ಜೂನ್ 2019 (16:06 IST)
ದೇಶದ ಹಿತದೃಷ್ಟಿಯಿಂದ ಹಲವು ಪ್ರಮುಖ ವಿಧೇಯಕಗಳು ಜಾರಿಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದೇವೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಸುಗಮ‌ ಕಲಾಪಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ 10 ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಮಾಡಬೇಕಾಗಿದೆ. ಈ ಬಗ್ಗೆ ಸರ್ಕಾರ ಯಾವುದೇ ಚರ್ಚೆಗೆ ಸಿದ್ಧವಿದೆ. ಆದರೆ ಕಲಾಪವನ್ನು ಸುಗಮವಾಗಿ ನಡೆಸಲು ವಿರೋಧ ಪಕ್ಷಗಳು ಬಿಡಬೇಕು ಎಂದು ಮನವಿ ಮಾಡಿದರು.

ಇನ್ನೂ ಕೇಂದ್ರದಿಂದ ಬರ ಅಧ್ಯಯನಕ್ಕೆ  ತಂಡಗಳು ಬರುತ್ತವೆ. ಅಧ್ಯಯನದ ನಂತರ ಬರಗಾಲಕ್ಕೆ ಕೇಂದ್ರ ಸರ್ಕಾರ ಸ್ಪಂದನೆ ಮಾಡುವದು. ಆದರೆ ರಾಜ್ಯದ ಮುಖ್ಯಮಂತ್ರಿ ಬರ ಅಧ್ಯಯನ ಮಾಡುವುದನ್ನು ಬಿಟ್ಟು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಇದು ಸರಿಯಲ್ಲ.

ಜಿಂದಾಲ್ ಗೆ ಭೂಮಿ ನೀಡುವ ನಿರ್ಧಾರವನ್ನು ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಹೋರಾಟ ಮಾಡುತ್ತಾರೆ ಎಂದು ತಿಳಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ