ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿದ್ದರೆ ನೋಡೊಣ: ಪರಮೇಶ್ವರ್

Sampriya

ಶನಿವಾರ, 5 ಏಪ್ರಿಲ್ 2025 (13:49 IST)
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಯಹತ್ಯೆ ಪ್ರಕರಣವನ್ನು ರಾಜ್ಯದ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ.  ಸಿಬಿಐಗೆ ನೀಡುವ ವಿಚಾರದ ಬಗ್ಗೆ ನಿರ್ಧಾರ ಇಲ್ಲ. ಅಗತ್ಯವಿದ್ದರೆ ನೋಡೋಣ ಎಂದು ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡನಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ ಎಂದು ಬೆಂಗಳೂರಿನಲ್ಲಿ ತಿಳಿಸಿದರು.

ವಿನಯ್‌ ವಾಟ್ಸಪ್‌ನಲ್ಲಿ ಹಾಕಿರುವ ಸಂದೇಶದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲೂ ಎಫ್‌ಐಆರ್ ಆಗಿದೆ. ಇಲ್ಲೂ ಎಫ್‌ಐಆರ್ ಆಗಿದೆ. ಎಲ್ಲವೂ ಸಮಗ್ರ ತನಿಖೆ ಆಗುತ್ತದೆ. ತನಿಖೆ ಆದಮೇಲೆ ಇವರಿಬ್ಬರೂ, ವಿನಯ್ ಆತ್ಮಹತ್ಯೆಗೆ ಕಾರಣರಾಗಿದ್ರಾ ಎಂದು ತಿಳಿದುಬಂದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಿಜೆಪಿಯವರು ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾರೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ಅವರು ಸತ್ತ ಮೇಲೆ ಬೆಳಕಿಗೆ ಬಂದಿದೆ. ಎಲ್ಲದಕ್ಕೂ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ