'ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲೋದು' : ಡಿಕೆಶಿ ಭವಿಷ್ಯ
ಶನಿವಾರ, 16 ಅಕ್ಟೋಬರ್ 2021 (13:47 IST)
ಕಲಬುರಗಿ, ಅ.16 : ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲವು ಸಾಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ನಾಲ್ಕು ಅವಗಿನಿ0ದಲೂ ಕಾಂಗ್ರೆಸ್ ಗೆದ್ದಿಲ್ಲ.
ಈ ಬಾರಿ ಜಿಲ್ಲೆಯ ಎಲ್ಲಾ ನಾಯಕರು ಒಮ್ಮತದಿಂದ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೊಳಿ ಅವರು ನಿಧನಕ್ಕೂ ಮುನ್ನಾ ತಮ್ಮನ್ನು ಭೇಟಿಯಾಗಿದ್ದು ನಿಜ, ನನ್ನ ಮಗ ಅಶೋಕ್ ಮನಗೊಳಿಯನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಹೇಳಿದ್ದರು. ಇಂದು ಎಂ.ಸಿ.ಮನಗೊಳಿ ನಮ್ಮೊಂದಿಗೆ ಇಲ್ಲ. ಆದರೆ ಅಶೋಕ್ ಅವರಿದ್ದಾರಲ್ಲ ಅವರನ್ನೇ ಕೇಳಿ ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಆದರೆ ಅಲ್ಪಸಂಖ್ಯಾತರು ಪ್ರಜ್ಞಾವಂತ ಮತದಾರರಿದ್ದಾರೆ. ಯಾರಿಗೆ ಮತ ಹಾಕಿದರೇ ಅನುಕೂಲ ಎಂಬ ಅರಿವು ಅವರಿಗಿದೆ. ಆದರೂ ಕಾಂಗ್ರೆಸ್ ಜಾತಿ ಆಧಾರಿತವಾಗಿ ಚುನಾವಣೆ ನಡೆಸುವುದಿಲ್ಲ. ನೀತಿಗಳ ಆಧಾರಿತವಾಗಿ ಮತ ಕೇಳುತ್ತೇವೆ ಎಂದು ಹೇಳಿದರು.
ಸಿಂಧಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವಾಗ ನಾನು ಬಂದಿದ್ದೆ. ನನ್ನ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವಾಗ ಕಂಡು ಬರುವ ಉತ್ಸಾಹವನ್ನೇ ಸಿಂಧಗಿಯಲ್ಲೂ ನೋಡಿದ್ದೇನೆ. ಯಾರೋ ಹೇಳಿದ ಮಾತನ್ನು ನಂಬಿ ನಾನು ಮಾತನಾಡುತ್ತಿಲ್ಲ.
ನನ್ನ ಕಣ್ಣಾರೆ ಕಂಡಿದ್ದನ್ನು ಹೇಳುತ್ತಿದ್ದೇನೆ. ಸಿಂಧಗಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಅಶೋಕ್ ಮನಗೊಳಿಯನ್ನು ಗೆಲ್ಲಿಸಬೇಕು ಎಂದು ನಿರ್ಧರಿಸಿದ್ದಾರೆ. ಈ ಮೊದಲು ಎಂ.ಸಿ.ಮನಗೊಳಿ ಅವರು ಗೆದ್ದಿದ್ದಕ್ಕಿಂತಲೂ ಹೆಚ್ಚಿನ ಮತಗಳ ಅಂತರದಲ್ಲಿ ಈ ಬಾರಿ ಅವರ ಪುತ್ರ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.