ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

Sampriya

ಸೋಮವಾರ, 21 ಜುಲೈ 2025 (15:18 IST)
Photo Credit X
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ. ಯಾರನ್ನೂ ಗುರಿಯಾಗಿಸಿಕೊಂಡು ತನಿಖೆ ನಡೆಸದೆ, ಕಾಲ ಮಿತಿಯಲ್ಲಿ ಕಾನೂನುಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕೆಂದು ಮಾಜಿ ಸಿಎಂ, ಬಿಜೆಪಿ ಸಂಸದ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗಾರರ ಬಳಿ ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದರು. 

ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಹೇಳಿದರು.

ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. 
ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ‌ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ