ಬಿಜೆಪಿಯವರು ರಿಪೋರ್ಟ್ ಕಾರ್ಡ್ ನೀಡಲಿ
ಇಂದು ಬಿಜೆಪಿ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.. ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗುವುದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ತಮ್ಮ ಹೊಸ ಪ್ರಣಾಳಿಕೆ ಬಿಡುಗಡೆಗೂ ಮುನ್ನ ತಮ್ಮ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ರು.. ಬಿಜೆಪಿ ನಾಯಕರಿಗೆ ತಾವು ನೀಡುವ ಭರವಸೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಹಿಂದಿನ ಚುನಾವಣೆಯಲ್ಲಿ ನೀಡಿದ ಭರವಸೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಈಡೇರಿಲ್ಲ ಎಂದು ಸಿದ್ದು ಕಿಡಿಕಾರಿದ್ದಾರೆ.. ಬಿಜೆಪಿ ಎಂದರೆ ದೇಶದ್ರೋಹಿಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.