ಸಚಿವಾಲಯ ಕಲಬುರ್ಗಿಗೆ ಬರಲಿ

ಶುಕ್ರವಾರ, 7 ಸೆಪ್ಟಂಬರ್ 2018 (18:39 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂಬ ಕೂಗು ಆರಂಭಗೊಂಡಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉತ್ತರ ಕರ್ನಾಟಕದಲ್ಲಿ ಆಡಳಿತ ಕಚೇರಿ, ವಿಭಾಗಗಳನ್ನು ಆರಂಭಿಸಲು ಸಿದ್ಧತೆ ನಡೆಸಿರುವಂತೆ ಈಗ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಪ್ರಮುಖ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ.

ಹೈ-ಕ ಅಭಿವೃದ್ಧಿಗಾಗಿ ಈಗಾಗಲೇ 371 ಜೆ ಕಲಂ ಜಾರಿಮಾಡಲಾಗಿದೆ. ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯದ ಅವಶ್ಯಕತೆ ಇದೆ ಎಂದು ಮಾಜಿ ಸಚಿವ ಹಾಗೂ ಸಮಿತಿ ಅಧ್ಯಕ್ಷ ವೈಜನಾಥ್ ಪಾಟೀಲ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಪ್ರಸ್ತುತ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಅದಕ್ಕಾಗಿ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯವನ್ನು ಮುಖ್ಯಮಂತ್ರಿ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ