BMRCL ನೌಕರರ ಸಂಘದಿಂದ ಸಿಎಂಗೆ ಪತ್ರ
ಕಳೆದ ತಿಂಗಳು ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮತ್ತು ಮಗು ಸಾವನ್ನಪಿಸಿದ್ದರು. ನಮ್ಮ ಮೆಟ್ರೋ ಕಾಮಗಾರಿಗಳ ಗುಣಮಟ್ಟ ಪರೀಕ್ಷೆ ಮಾಡಿಸುವಂತೆ BMRCL ನೌಕರರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ಈಗಾಗಲೆ ನಿರ್ಮಾಣವಾಗಿರುವ ಮೊದಲ ಹಾಗೂ ಎರಡನೆಯ ಹಂತದ ಮೆಟ್ರೋ ಪಿಲ್ಲರ್‌ಗಳ ಗುಣಮಟ್ಟ ಪರಿಶೀಲನೆ ಮಾಡಬೇಕು. ಈ ಪರಿಶೀಲನೆಗೆ ಐಐಟಿ ಅಥವಾ IISc ತಂಡವನ್ನು ನೇಮಿಸಬೇಕು ಎಂದು ನೌಕರರ ಸಂಘದ ಸೂರ್ಯ ನಾರಾಯಣ ಮೂರ್ತಿ ಸಿಎಂ ಬೊಮ್ಮಾಯಿ ಅವರಿಗೆ ವಿಸ್ತೃತ ಪತ್ರ ಬರೆದಿದ್ದಾರೆ. ಹಾಗೆ ಬಿಎಂಆರ್ಸಿಎಲ್ನ ಆಡಳಿತ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ, 20 ಜನರು ಭ್ರಷ್ಟ ಅಧಿಕಾರಿಗಳಿಂದ ಮೆಟ್ರೋ ಕಾಮಗಾರಿಗೆ ತೊಂದರೆಯಾಗುತ್ತಿದ್ದು, ಇದರಿಂದ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಎಂಜಿ ರಸ್ತೆಯಿಂದ ಬೈಯಪನಹಳ್ಳಿ ಮತ್ತು ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಪಿಲ್ಲರ್‌ಗಳ ಸಾಮರ್ಥ್ಯ ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕಾಗಿದೆ. ಮೆಟ್ರೋ ಪಿಲ್ಲರ್‌ಗಳ ಸುರಕ್ಷತೆಯ ಬಗ್ಗೆ ಹಲವಾರು ಸಂದರ್ಭಗಳಲ್ಲಿ BMRCL ಆಡಳಿತಕ್ಕೆ ಪತ್ರ ಬರೆದಿದ್ದೇನೆ. ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ BMRCL ಆಡಳಿತ ವಿಭಾಗಕ್ಕೆ ಪತ್ರ ಬರೆದರೂ, ಇಂಜಿನಿಯರ್‌ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.