ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಪತ್ರ
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು, ಶಾಸಕರ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ, ಮೂಡಿಗೆರೆಯಲ್ಲಿ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ವಿಜಯ ಸಂಕಲ್ಪ ಯಾತ್ರೆ ಮಾಡಿತ್ತು. ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಅಸಮಾಧಾನಗೊಂಡು ಎಂ.ಪಿ.ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಕಾರ್ಯಕರ್ತರು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ 10 ಅಂಶಗನ್ನೊಳಗೊಂಡ ಪತ್ರವನ್ನು ಬರೆದು ಇ-ಮೇಲ್ ಮಾಡಿದ್ದಾರೆ