ಬೆಂಗಳೂರು ನಗರ ಉಸ್ತುವಾರಿಗಾಗಿ ಕಿತ್ತಾಟ

ಸೋಮವಾರ, 11 ಅಕ್ಟೋಬರ್ 2021 (20:28 IST)
ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ಉಸ್ತುವಾರಿ ಲಾಭದಾಯಕ ಸ್ಥಾನವಾಗಿರುವುದರಿಂದ ಇಷ್ಟೆಲ್ಲಾ ಗಲಾಟೆಗಳಾಗುತ್ತಿದೆ ಎಂದರು.
 
ಜಿ.ಎಸ್.ಟಿ ಪರಿಹಾರ, ನಮ್ಮ ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗಟ್ಟಿಧ್ವನಿಯಲ್ಲಿ ಕೇಳಬೇಕು. ಇದೇನು ಭಿಕ್ಷೆಯಲ್ಲ, ನಮ್ಮ ಹಕ್ಕು.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ ಇಂದ ಸೆಪ್ಟೆಂಬರ್ ವರೆಗೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 3,000 ಕೋಟಿ ರೂಪಾಯಿ ತೆರಿಗೆ ಹೆಚ್ಚು ಸಂಗ್ರಹವಾಗಿದೆ. ಸ್ಟಾಲಿನ್ ಸರ್ಕಾರ ಮೂರು ರೂಪಾಯಿ ತೆರಿಗೆ ಕಡಿಮೆ ಮಾಡಿದೆ, ನಮ್ಮ ರಾಜ್ಯದಲ್ಲಿ ಕನಿಷ್ಟ ಹತ್ತು ರೂಪಾಯಿ ಕಡಿಮೆ ಮಾಡಬೇಕು. ಆಗ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ.
 
ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಕಳೆದ ಏಳು ವರ್ಷದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಒಂದರಿಂದಲೇ ಕೇಂದ್ರ ಸರ್ಕಾರಕ್ಕೆ 23 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.
 
ಕರ್ನಾಟಕವೊಂದರಿಂದಲೇ 1.20 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಬಡವರ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿಯವರು ತೆರಿಗೆ ಕಡಿತ ಮಾಡಿ ಜನರಿಗೆ ಸಹಾಯ ಮಾಡಲಿ ಎಂದರು‌.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ