ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

Sampriya

ಶನಿವಾರ, 2 ಆಗಸ್ಟ್ 2025 (19:45 IST)
Photo Credit X
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸುತ್ತಿದ್ದ ಹಾಗೇ ಅವರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. 

ಪ್ರಜ್ವಕ್ ರೇವಣ್ಣಗೆ ಶಿಕ್ಷೆಯ ಪ್ರಮಾಣ ಘೋಷಣೆ ಮಾಡುತ್ತಿದ್ದ ಹಾಗೇ ಅವರ ಅಜ್ಜ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಣೆ ಮಾಡಿ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಪ್ರಜ್ವಲ್ ಸಂಬಂಧ ಇಂದು ಮಹತ್ವದ ಆದೇಶ ಹೊರಡಿಸುತ್ತಿದ್ದ ಹಾಗೇ ಟಿವಿ ನೋಡುತ್ತಿದ್ದ ದೇವೇಗೌಡ, ಶಿಕ್ಷೆ ಪ್ರಕಟ ಆಗುತ್ತಿರುವಂತೆಯೇ ಅಘಾತಕ್ಕೊಳಗಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ