ಇನ್ಮುಂದೆ ಕಬಾಬ್‌ಗೆ ಕೃತಕ ಬಣ್ಣ ಬಳಸಿದರೆ ಜೀವಾವಧಿ ಶಿಕ್ಷೆ: ಹುಷಾರ್

Sampriya

ಸೋಮವಾರ, 24 ಜೂನ್ 2024 (19:50 IST)
Photo Courtesy X
ಬೆಂಗಳೂರು: ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗೆ ಕೃತಕ ಬಣ್ಣ ಬಳಕೆಗೆ ನಿಷೇಧ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ  ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದಲ್ಲಿ ಜೀವಾವಧಿ ಶಿಕ್ಷೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ಸೂಚನೆ ನೀಡಿ, ಆಹಾರ ಸುರಕ್ಷತೆ ದೃಷ್ಟಿಯಿಂದ  ಇದೀಗ ಫಿಶ್, ಚಿಕನ್ ಕಬಾಬ್‌ಗಳಿಗೆ ಕೃತಕ ಬಣ್ಣ  ಬಳಕೆಯನ್ನು ನಿಷೇಧ ಮಾಡಲಾಗಿದೆ. ಕಳಪೆ ಗುಣಮಟ್ಟದ ಆಹಾರ ಸೇವನೆಯಿಂದ ಜನರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಅದರಂತೆ ಇನ್ಮುಂದೆ ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಲಾಗಿದೆ.

ಇನ್ನೂ ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ದಿನೇಶ್ ಗುಂಡೂರಾವ್ ಅವರು,     ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೆಜ್/ಚಿಕನ್/ಫಿಶ್ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶಿಲಾಗಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ