ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ..! ಆರೋಪಿ ಬಂಧನ

ಭಾನುವಾರ, 1 ಅಕ್ಟೋಬರ್ 2023 (16:03 IST)
ಬೈಲಹೊಂಗಲ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ  ಜೀವ ಬೆದರಿಕೆ ಪತ್ರ ಬಂದಿದ್ದು  ಪತ್ರದಲ್ಲಿ “ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ. ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ‌ ಮಾಡುತ್ತಿಲ್ಲ. ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ‌ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯಾ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ” ಎಂದು ಪತ್ರದಲ್ಲಿ ಬರೆಯಲಾಗಿದ್ದು ಪತ್ರ ಬರೆದ ಅನಾಮಿಕನನ್ನ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ