ಮಹಿಳೆ ಅಡುಗೆ ಕೋಣೆಗೆ ಮಾತ್ರ ಸೀಮಿತ: ಶಾಮನೂರು ಹೇಳಿಕೆ ಖಂಡಿಸಿದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್

Sampriya

ಭಾನುವಾರ, 31 ಮಾರ್ಚ್ 2024 (15:18 IST)
ಬೆಂಗಳೂರು: ಮಹಿಳೆ ಅಡುಗೆ ಕೋಣೆಗೆ ಮಾತ್ರ ಸೀಮಿತ ಎಂದಿದ್ದ ಕಾಂಗ್ರೆಸ್‌ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ಅವರು ಖಂಡಿಸಿದ್ದಾರೆ.

ಈಚೆಗೆ ಸಮಾರಂಭವೊಂದರಲ್ಲಿ ಮಾತನಾಡಿದ್ದ ಅವರು, ಕಾಂಗ್ರೆಸ್‌ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, `ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು  ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು.

ಇನ್ನೂ ಶಾಮನೂರು ಹೇಳಿಕೆಗೆ ಭಾರೀ ಆಕ್ರೋಶ, ಖಂಡನೆ ವ್ಯಕ್ತವಾಗಿತ್ತು. ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಸಹಿತ ಅನೇಕರು ಕಿಡಿಕಾರಿದ್ದರು.

ಇದೀಗ ಮಹಿಳೆ ಅಡುಗೆ ಮನೆಗೆ ಮಾತ್ರ ಲಾಯಕ್ಕು ಎಂಬರ್ಥದ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಖಂಡಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಹೆಣ್ಣು ಕುಟುಂಬದ ಕಣ್ಣು, ಪಾಪ ಅವರಿಗೆ (ಶಾಮನೂರು ಶಿವಶಂಕರಪ್ಪ) ವಯಸ್ಸು ಆಗಿದೆ. ನಾವು ಆರು ಜನ ಮಹಿಳೆಯರಿಗೆ ಟಿಕೆಟ್ ಕೊಟ್ಟಿದ್ದೇವೆ. ಹೆಣ್ಣು ಮಕ್ಕಳಿಗೆ ಕಾರ್ಯಕ್ರಮವನ್ನು ಕೊಟ್ಟಿದ್ದೇವೆ. ಶಾಮನೂರು ಹೇಳಿಕೆ ಖಂಡನೀಯ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ