ಲಿಂಗಸುಗೂರು: ಜಮೀನು ವಿಚಾರವಾಗಿ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ ಅಪರಾಧಿಗಳಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟ ಮಾಡಿದೆ.
2019ರಲ್ಲಿ ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಜಾಮೀನು ವಿಚಾರದಲ್ಲಿ ಅಮರೇಶ ಅವರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಲಾಗಿತ್ತು.
ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಿದ್ದಾರೆ.