ಬಿಎಸ್ ವೈಗೆ ಲಿಂಗಾಯತ ಸಮುದಾಯದ ಬೆಂಬಲ

ಮಂಗಳವಾರ, 20 ಜುಲೈ 2021 (09:03 IST)
ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದ್ದರೆ, ಸಿಎಂ ಯಡಿಯೂರಪ್ಪಗೆ ಲಿಂಗಾಯತ ಸಮುದಾಯದ ಬೆಂಬಲ ಸಿಕ್ಕಿದೆ.


ಒಂದು ವೇಳೆ ಬಿಎಸ್ ವೈರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಪಕ್ಷದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ರಂಭಾಪುರ ಶ್ರೀ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ವಿಪಕ್ಷಗಳಲ್ಲಿರುವ ಲಿಂಗಾಯತ ಸಮುದಾಯದ ನಾಯಕರೂ ಯಡಿಯೂರಪ್ಪ ಬೆನ್ನಿಗೆ ನಿಂತಿರುವುದು ವಿಶೇಷ.

ಇತ್ತ ಸಿಎಂ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಎಸ್ ವೈ ಬೆಂಬಲಿಸಿ ಮಾತನಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ