ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯದಲ್ಲಿರುವ ಎಲ್ಲ ಡಿಸಿಸಿ ಬ್ಯಾಂಕ್ ಗಳ ಮೂಲಕ ಬಡವರ ಬಂಧು ಯೋಜನೆಯಡಿ ಸಣ್ಣ ವ್ಯಾಪಾರಿಗಳಿಗೆ ಸಾಲಸೌಲಭ್ಯ ಒದಗಿಸಲು ಕ್ರಮವಹಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ತುಮಕೂರು ನಗರದ ಕ್ಯಾತ್ಸಂದ್ರದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯ ಶ್ರಮಿಕ ಅತಿ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತುಮಕೂರು ಜಿಲ್ಲೆಯಲ್ಲಿ ಒಂದು ಕೋಟಿ ಸಾಲ ನೀಡುವ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಬೀದಿ ಬದಿ ವ್ಯಾಪಾರಿಗಳು ಖಾಸಗಿ ಅವರಿಂದ ಸಾಲ ಪಡೆದು ಹೆಚ್ಚು ಬಡ್ಡಿಯನ್ನು ಕಟ್ಟುವುದನ್ನು ತಪ್ಪಿಸಲು ಬಡವರ ಬಂಧು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯಡಿ ಸಾಲ ಮರು ಪಾವತಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.