ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್ ಡೌನ್: ಕರ್ನಾಟಕದಲ್ಲೂ ಕಟ್ಟೆಚ್ಚರ

ಶುಕ್ರವಾರ, 12 ಮಾರ್ಚ್ 2021 (09:39 IST)
ಮುಂಬೈ: ಕೊರೋನಾ ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ್ತೆ ಲಾಕ್ ಡೌನ್ ವಿಧಿಸಲಾಗಿದೆ. ಈ ನಡುವೆ ಕರ್ನಾಟಕದಲ್ಲೂ ಪ್ರಕರಣ ಹೆಚ್ಚುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ.


ಗುರುವಾರ 13 ಸಾವಿರ ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಗಂಭೀರ ಸ್ಥಿತಿ ಎದುರಾಗಿದೆ. ಹೀಗಾಗಿ ಮಾರ್ಚ್ 15 ರಿಂದ 21 ರವರೆಗೆ ನಾಗ್ಪುರದಲ್ಲಿ ಲಾಕ್ ಡೌನ್ ವಿಧಿಸಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನೂ ಕೆಲವು ನಗರಗಳಿಗೆ ವಿಸ್ತರಣೆಯಾಗುವ ಸಾಧ‍್ಯತೆಯಿದೆ.

ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ನಾವು ಇದನ್ನು ಎಚ್ಚರಿಕೆಯ ಕರೆಗಂಟೆ ಎಂದು ಭಾವಿಸಬೇಕಿದೆ. ಹಬ್ಬ-ಹರಿದಿನಗಳಲ್ಲಿ, ಸಮಾರಂಭಗಳಲ್ಲಿ ತಪ್ಪದೇ ಮಾಸ್ಕ್ ಧರಿಸಿ ಸಾಮಾಜಿಕ ಅಂತವರವನ್ನು ಕಾಪಾಡಿ ಜನಸಂದಣಿಯಿಂದ ದೂರವಿರಿ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ