ಸಿದ್ದರಾಮಯ್ಯ ಜ್ಯೋತಿಷ್ಯ ಕೇಂದ್ರಕ್ಕೆ ಬೀಗ ಹಾಕಿ ; ಹೊಡಿರಿ ಹಲಗಿ
ಮಂಗಳವಾರ, 10 ಡಿಸೆಂಬರ್ 2019 (16:18 IST)
ಸಿದ್ದರಾಮಯ್ಯ ಬರೀ ಬುರುಡೆ ಬಿಡುತ್ತಾರೆ. ಅವರ ಬುರುಡೆ ಮಾತಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಇನ್ನಾದರೂ ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿ ಮನೆಗೆ ಹೋಗುವುದು ಒಳಿತು.
ಹೀಗಂತ ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ರು.
ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಸಮೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.
ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ. ಸಿದ್ದರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿಯೇ ಮುಂದುವರೆಯಬೇಕು. ಅವರು ಈವರೆಗೂ ಎಲ್ಲೇ ಹೋದರೂ ಪಕ್ಷವನ್ನ ಭಾಗ ಮಾಡಿದ್ದಾರೆ. ಹೀಗಾಗಿ ಇನ್ನೂ ಅವರು ಕಾಂಗ್ರೆಸ್ ನಲ್ಲಿ ಮೂರು ಭಾಗ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದರು.