ದಿನೇ ದಿನೆ ಭಾರಿ ಸಂಖ್ಯೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ವರದಿ ಹಿನ್ನಲೆಯಲ್ಲಿ ತಜ್ಞರ ಸಲಹೆ ಮೇರೆಗೆ
ಜುಲೈ ಅಂತ್ಯದವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾಗಿ ಸಚಿವರು ಘೋಷಣೆ ಮಾಡಿದ್ದಾರೆ.
ಜುಲೈ 31ರ ವರೆಗೆ 10 ದಿನಗಳ ಕಾಲ ಕೊಪ್ಪಳದ ಗಂಗಾವತಿ ನಗರ ಮತ್ತು ಶ್ರೀರಾಮನಗರ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಘೋಷಿಸಿದ್ದಾರೆ.
ಗಂಗಾವತಿ ನಗರ ಮತ್ತು ಶ್ರೀ ರಾಮನಗರ ಕೊರೊನಾ ಹಾಟ್ ಸ್ಪಾಟ್ ಆಗುತ್ತಿರುವ ಕಾರಣಕ್ಕೆ ಜಿಲ್ಲಾಡಳಿತದ ಜೊತೆ ಚರ್ಚಿಸಿ ಲಾಕ್ ಡೌನ್ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಲಾಕ್ ಡೌನ್ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತದೆ. ಆದರೆ ಅನಗತ್ಯವಾಗಿ ರಸ್ತೆಗಿಳಿಯುವವರ ವಿರುದ್ಧ ಪೋಲಿಸರು ಕಠಿಣ ಕ್ರಮ ಜರುಗಿಸುತ್ತಾರೆ ಎಂದು ಹೇಳಿದ್ದಾರೆ.