ಲಾಕ್ ಡೌನ್ ಉಲ್ಲಂಘನೆ : 3 ದಿನಗಳಲ್ಲಿ 300 ವಾಹನ ವಶಕ್ಕೆ

ಮಂಗಳವಾರ, 31 ಮಾರ್ಚ್ 2020 (21:30 IST)
ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದರೂ ಅದನ್ನು ಉಲ್ಲಂಘಿಸಿದವರ ವಿರುದ್ಧ ಈ ಜಿಲ್ಲೆಯಲ್ಲಿ 300 ಕ್ಕೂ ಅಧಿಕ ಕೇಸ್ ಗಳನ್ನು ಹಾಕಲಾಗಿದೆ.

ಕಲಬುರಗಿಯಲ್ಲಿ ಕಳೆದು ಮೂರು ದಿನಗಳಲ್ಲಿ 300 ಕ್ಕೂ ಅಧಿಕ ಬೈಕ್, ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ವಿವಿಧ ಬಗೆಯ 300 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ. ಆದರೂ ಜನರು ವಿನಾಕಾರಣವಾಗಿ ಓಡಾಡುತ್ತಿದ್ದಾರೆ. ಅನಗತ್ಯವಾಗಿ ಓಡಾಡುವವರ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.

ಕಲಬುರಗಿ ನಗರದ ಜಗತ್ ವೃತ್ತ, ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತ, ಸೂಪರ್ ಮಾರ್ಕೆಟ್, ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಓಡಾಡುತ್ತಿರುವ ಜನರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ