ಲೋಕಸಭಾ ಚುನಾವಣೆಯ ಹಿನ್ನೆಲೆ; ರಾಜ್ಯದ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ
ಮಂಗಳವಾರ, 19 ಮಾರ್ಚ್ 2019 (10:22 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಏಪ್ರಿಲ್ 18 ರಂದು ರಾಜ್ಯದ ಒಟ್ಟು 14 ಕ್ಷೇತ್ರಗಳ ಮೊದಲ ಹಂತದ ಚುನಾವಣೆಗೆ ಮಾರ್ಚ್ 19 ಅಂದ್ರೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮಾ.26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ಮಾ. 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ. 29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಮೈಸೂರು,ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.