ಲೋಕಾಯುಕ್ತ ಲಂಚ ಪ್ರಕರಣ: ದೂರುದಾರರಿಗೆ ಬೆದರಿಕೆ ಕರೆ

ಗುರುವಾರ, 2 ಜುಲೈ 2015 (17:07 IST)
ಲೋಕಾಯುಕ್ತರು ತಮ್ಮಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಲೋಕಾಯುಕ್ತರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಇಂಜಿನಿಯರ್ ಎಂ.ಎನ್.ಕೃಷ್ಣಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ಇಂದು ಮತ್ತೊಂದು ದೂರು ದಾಖಲಿಸಿದ್ದಾರೆ. 
 
 ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದು, ಭೂಗತ ಪಾತಕಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕೃಷ್ಣಮೂರ್ತಿ ಮತ್ತೊಂದು ದೂರು ದಾಖಲಿಸಿದ್ದಾರೆ ಎಂದು ಖಚಿತಪಡಿಸಿದ್ದಾರೆ. 
 
ಪ್ರಕರಣದ ಹಿನ್ನೆಲೆ: ತಮ್ಮ ಕಾರ್ಯದಲ್ಲಿ ಅಕ್ರಮ ನಡೆದಿದೆ ಎಂದು ಸುಳ್ಳು ನೆಪ ಹೇಳಿ ನನ್ನಿಂದ ಒಂದು ಕೋಟಿ ರೂ. ಹಣ ಪಡೆಯಲು ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು ತಮಗೆ ಒತ್ತಡ ಹೇರಿದ್ದರು ಎಂದು ಆರೋಪಿಸಿ ಕೃಷ್ಣಮೂರ್ತಿ ಲೋಕಾಯುಕ್ತರಲ್ಲಿ ದೂರು ನೀಡಿದ್ದರು. 
 
ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿದ್ದ ಲೋಕಾಯುಕ್ತರು, ತನಿಖೆ ನಡೆಸುತ್ತಿದ್ದರು. ಇದೇ ಕಾರಣದಿಂದಲೇ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗಿದೆ. 

ವೆಬ್ದುನಿಯಾವನ್ನು ಓದಿ