ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್
ಚುನಾವಣೆ ಹೊಸ್ತಿಲಲ್ಲೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.. ಗದಗ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಭ್ರಷ್ಟ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಉಪ ತಹಶೀಲ್ದಾರ್ ವಿಜಯಕುಮಾರ್ ಸ್ವಾಮಿ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.. ಬೀದರ್ನ ಆನಂದ್ ನಗರ ಹಾಗೂ ಬಸವಕಲ್ಯಾಣ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.. ಬಸವಕಲ್ಯಾಣ ಮುಡಬಿ ಕಚೇರಿ ಹಾಗೂ ಬಸವಕಲ್ಯಾಣ ಪಟ್ಟಣದ ಗ್ಯಾರೆಜ್, ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.. ಸುರೇಶ್ ಮೇದಾ ಸಣ್ಣ ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದು, ಇವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಬೀದರ್ನ ಗುರುನಗರದ ನಿವಾಸ ಹಾಗೂ ನೌಬಾದ್ನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ SP ಎ.ಆರ್ ಕರ್ಲೂನ್ ಮಾರ್ಗದರ್ಶನದಲ್ಲಿ DySP ಎನ್. ಎಂ. ಓಲೇಕಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.. ದಾಳಿ ವೇಳೆ ಅಪಾರ ಪ್ರಮಾಣದ ನಗದು, ಮಹತ್ವದ ದಾಖಲೆ ಪತ್ರಗಳು ಪತ್ತೆಯಾಗಿವೆ.. ಆದಾಯ ಮೀರಿ ಆಸ್ತಿಗಳಿಕೆ ಹಿನ್ನೆಲೆ ಭ್ರಷ್ಟರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.