ಲೋಕಾಯುಕ್ತ ದಾಳಿ ಒಟ್ಟು 65.84 ಕೋಟಿ ರು. ವಶ
ಕರ್ನಾಟಕ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ರಾಜ್ಯದ 9 ಜಿಲ್ಲೆಗಳಲ್ಲಿನ 13 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ನಿವಾಸಗಳು ಸೇರಿದಂತೆ 68 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ನೀರಿಳಿಸಿದ್ದಾರೆ.ದಾಳಿ ವೇಳೆ ಕೋಟ್ಯಂತರ ನಗದು, ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ವಜ್ರದ ಆಭರಣಗಳು ಹಾಗೂ ದುಬಾರಿ ವಸ್ತುಗಳು ಸೇರಿದಂತೆ ಒಟ್ಟು 65.84 ಕೋಟಿ ರು. ಮೌಲ್ಯದ ಆಸ್ತಿಗಳನ್ನ ವಶಕ್ಕೆ ಪಡೆದಿದ್ದಾರೆ.