ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ
ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆ.ಆರ್ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ 7 ಜನ ಅಧಿಕಾರಿಗಳಿಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.