ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ

ಶುಕ್ರವಾರ, 31 ಆಗಸ್ಟ್ 2018 (14:27 IST)
ನಿರಂತರ ಮಳೆಯಿಂದಾಗಿ ಹಾನಿಗೊಳಗಾಗಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ನೆರೆ ಸಂತ್ರಸ್ತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ನೀಡಿದರು.

ಪರಿಹಾರ ಕೇಂದ್ರಗಳಲ್ಲಿ ಸರ್ಕಾರ ಅಗತ್ಯ ಸೌಲಭ್ಯ ಒದಗಿಸಿದ್ದು, ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ ಪಟ್ಟಣದ ಅಂಬೇಡ್ಕರ್ ಭವನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ನಿಲಯ ಮತ್ತು ವಾಲ್ಮೀಕಿ ಭವನಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಪರಿಶೀಲಿಸಿದರು.

ಸಂತ್ರಸ್ತರ ಅಹವಾಲುಗಳನ್ನು ಲೋಕಾಯುಕ್ತರು  ಆಲಿಸಿದರು. ಈ ಸಂದರ್ಭದಲ್ಲಿ ಎಡಿಜಿಪಿ ಸಂಜಯ್, ಹಿರಿಯ ಐಎಎಸ್ ಅಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿ'ಸೋಜಾ ಮತ್ತಿತರ ಅಧಿಕಾರಿಗಳು ಇದ್ದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ