ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ !

ಬುಧವಾರ, 15 ಜೂನ್ 2022 (12:05 IST)
ಬೆಂಗಳೂರು : ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.

ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಸೋಮಣ್ಣ, ಹಾಲಪ್ಪ ಆಚಾರ್ ಸೇರಿ ಹಲವು ಸಚಿವರು, ಅಧಿಕಾರಿಗಳು, ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ಭೀಮನಗೌಡ ಸಂಗನಗೌಡ ಪಾಟೀಲ್ ಲೋಕಾಯುಕ್ತರಾಗಿರುವ ಹಿನ್ನೆಲೆಯಲ್ಲಿ ಸ್ವಗ್ರಾಮದಲ್ಲಿ ಸಂಭ್ರಮ ಮನೆಮಾಡಿದೆ. ಬಿ.ಎಸ್. ಪಾಟೀಲ್ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಣ ಸ್ವಗ್ರಾಮದಲ್ಲಿ ಕಲಿತಿದ್ದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಕಲಾ ವಿಭಾಗ, ಲಾ ಕಾಲೇಜಿನಲ್ಲಿ ಎಲ್ಎಲ್ಬಿ ಪದವಿ ಪೂರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ