ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್ ನಲ್ಲಿ ಕ್ಲೀನ್ ಚಿಟ್: ಕರೆಕ್ಟ್ ಆಗಿ ಭವಿಷ್ಯ ನುಡಿದಿದ್ದ ಕುಮಾರಸ್ವಾಮಿ

Krishnaveni K

ಬುಧವಾರ, 19 ಫೆಬ್ರವರಿ 2025 (16:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಕೆಲವೇ ಗಂಟೆಗಳ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ಇದನ್ನು ಕರೆಕ್ಟ್ ಆಗಿ ಊಹಿಸಿದ್ದರು.

ಸಿಎಂ ಸಿದ್ದರಾಮಯ್ಯ ಮತ್ತು ಪಾರ್ವತಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಲೋಕಾಯುಕ್ತ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಮತ್ತು ಇತರರ ವಿರುದ್ಧ ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದೆ.

ಆದರೆ ಈ ಬಗ್ಗೆ ಕೆಲವೇ ಗಂಟೆಗಳ ಮೊದಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕರೆಕ್ಟ್ ಆಗಿ ಊಹಿಸಿದ್ದರು. ತನಿಖೆ ನಡೆಸಿದ ಅಧಿಕಾರಿಗಳು ಆ ವರದಿಯನ್ನು ಮೊದಲು ಮೇಲಧಿಕಾರಿಗಳಿಗೆ ನೀಡಬೇಕಂತೆ. ಮೇಲಧಿಕಾರಿಗಳು ಗ್ರೀನ್ ಸಿಗ್ನಲ್ ನೀಡಿದ ನಂತರವಷ್ಟೇ ವರದಿ ಬಹಿರಂಗಗೊಳಿಸುವುದಂತೆ. ಈ ಮೇಲಧಿಕಾರಿಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಅಧಿಕಾರಿಗಳೇ. ಇವರೆಲ್ಲಾ ಯಾವ ರೀತಿ ವರದಿ ನೀಡಬಹುದು ಎಂದು ನಮಗೆ ಗೊತ್ತಿಲ್ವಾ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಸಿಕ್ಕಿದೆ.

ಇನ್ನು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪಾರ್ವತಿ ವಿರುದ್ಧ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸದೇ ಇದ್ದರೆ ನಾನು ಹೆಸರೇ ಬದಲಾಯಿಸುತ್ತೇನೆ ಎಂದು ಶಪಥ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ