'ಲೋಕಾ'ದಲ್ಲಿ ಭ್ರಷ್ಟಾಚಾರ ಪ್ರಕರಣ: ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

ಗುರುವಾರ, 23 ಜುಲೈ 2015 (16:23 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ ರಾಜ್ಯ ಸರ್ಕಾರದ ಗೃಹ ಸಚಿವರಿಗೆ ಇಂದು ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿದೆ.  
 
ಪ್ರಕರಣದ ತನಿಖೆಗೆಂದೇ ಸರಕಾರ ಈ ಹಿಂದೆ ನೇಮಿಸಿದ್ದ ವಿಶೇಷ ತನಿಖಾ ತಂಡವು ಈ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಪ್ರಕರಣ ಸಂಬಂಧ ಕಳೆದ ಹಲವು ದಿನಗಳಿಂದ ಕಲೆ ಹಾಕಿದ್ದ ಎಲ್ಲಾ ಮಾಹಿತಿಯ ವಿವರಗಳು ಈ ವರದಿಯಲ್ಲಿದೆ ಎನ್ನಲಾಗಿದೆ. ವರದಿಯನ್ನು ಸರ್ಕಾರದ ಗೃಹ ಕಾರ್ಯದರ್ಶಿ ಅವರಿಗೆ ಸಲ್ಲಿಸಲಾಗಿದೆ.  
 
ಈ ಪ್ರಕರಣ ಸಂಬಂಧ ಶಂಕರೇಗೌಡ ಹಾಗೂ ಶ್ರೀನಿವಾಸ್ ಗೌಡ, ಅಶೋಕ್ ಕುಮಾರ್ ಎಂಬ ಮೂವರನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ ಅವರನ್ನು ಬಂಧಿಸಿಲ್ಲ. 
 
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣ ಇದಾಗಿದ್ದು, ಇದನ್ನು ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸುವುದು ಸರಿಯಲ್ಲ ಎಂದು ಲೋಕಾಯುಕ್ತ ವೈ.ಭಾಸ್ಕರ್ ರಾವ್ ಅವರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ, ಸರ್ಕಾರವು ಎಡಿಜಿಪಿ ಕಮಲ್ ಪಂತ್ ನೇತೃತ್ವದಲ್ಲಿ ಎಸ್ಐಟಿಯನ್ನು ರಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೇ ತಂಡ ಪ್ರಸ್ತುತ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. 

ವೆಬ್ದುನಿಯಾವನ್ನು ಓದಿ