ಒಂಟಿ ಸಲಗ ದಾಳಿ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಲು ಸೂಚನೆ

ಭಾನುವಾರ, 17 ಡಿಸೆಂಬರ್ 2023 (21:09 IST)
ರಾಮನಗರದ ಅರಳಿಕರೆದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ ನೀಡಿದರು.
 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಗೃಹ ಕಚೇರಿಯಿಂದ ದೂರವಾಣಿ ಮೂಲಕ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಅವರು, "ಗ್ರಾಮಸ್ಥರ ಬೇಡಿಕೆಯಂತೆ ಅಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಿನಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ